ಮೂರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

0
28
ಆತ್ಮಹತ್ಯೆ

ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಮೂರು ಮಕ್ಕಳೊಂದಿಗೆ ನೀರಿನ ಸಂಪ್‌ನಲ್ಲಿ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ.
ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಗೀತಾ ರಾಮು ಚೌವ್ಹಾಣ(೩೨), ಸೃಷ್ಟಿ(೬), ಸಮರ್ಥ(೪), ಕಿಶನ್(೩) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಪತಿಯೊಂದಿಗೆ ಜಗಳ ಮಾಡಿದ್ದಾರೆ ಎನ್ನಲಾಗಿದ್ದು, ಗೀತಾ ಅವರ ಪತಿ ರಾಮು ಮಲಗಿದ್ದ ವೇಳೆ ಮೂವರು ಮಕ್ಕಳನ್ನು ನೀರಿನ ಸಂಪ್‌ಗೆ ಎಸೆದ ತಾಯಿ ಬಳಿಕ ಸಂಪ್‌ನಲ್ಲಿ ತಾನೂ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ: ಬೊಮ್ಮಾಯಿ
Next articleನಾನೇನೂ ರಾಜಕೀಯ ನಿವೃತ್ತಿ ಪಡೆದುಕೊಂಡಿಲ್ಲ