ಮೈಸೂರನ್ನು ನಂಬರ್ ಒನ್ ಸ್ಥಾನಕ್ಕೆ ಕರೆದೊಯ್ಯಿರಿ: ಅಧಿಕಾರಿಗಳಿಗೆ ಸಿಎಂ ಟಾರ್ಗೆಟ್

0
19

ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ದಸರಾ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಜನರ ನಡುವೆ ಇದ್ದರೆ ಅಧಿಕಾರಿಗಳ ಜನಪ್ರಿಯತೆಯೂ ಹೆಚ್ಚುತ್ತದೆ. ಜನರ ಸಮಸ್ಯೆಗಳೂ ಅರ್ಥ ಆಗುತ್ತವೆ. ಸಮಸ್ಯೆ ಅರ್ಥವಾದಷ್ಟೂ ಪರಿಣಾಮಕಾರಿ ಪರಿಹಾರ ಒದಗಿಸಲು ಸಾಧ್ಯ ಎಂದು ಸಲಹೆ ನೀಡಿದರು.
ದಸರಾ ಜನರ ಹಬ್ಬ. ಆದ್ದರಿಂದ ಜನರ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯ. ಇದು ಈ ಬಾರಿಯೂ ಯಶಸ್ವಿಯಾಗಿದೆ. ಮುಂದಿನ ಬಾರಿ ಜನರ ಜತೆ ಪೂರ್ವಭಾವಿ ಸಭೆಗಳನ್ನು ನಡೆಸಿ ದಸರಾವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಿ ಎಂದು ಕರೆ ನೀಡಿದರು.
ಅಧಿಕಾರಿಗಳಿಗೆ ಜನಪರವಾದ ಮನಸ್ಸು, ಕಾಳಜಿ, ಹೃದಯ ಇದ್ದರೆ ಮಾತ್ರ ಜನಪರ ಅಭಿವೃದ್ಧಿ ಸಾಧ್ಯ. ಕಳೆದ ಐದು ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ ಇಡೀ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿ ಎಂದು ಸೂಚನೆ ನೀಡಿದರು.

Previous articleಅಪರಿಚಿತ ವಾಹನ ಡಿಕ್ಕಿ ಓರ್ವ ಸಾವು
Next articleಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ