Home ತಾಜಾ ಸುದ್ದಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ

0
201
ದಸರಾ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಇಂದು ಆಹ್ವಾನ ನೀಡಿದರು.
ಇದೇ ಪ್ರಥಮ ಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ನೆರವೇರಿಸಲಿದ್ದು, ಸೆ. 26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45 ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.