ಮೈಸೂರು ದಸರಾ: ನಾಡಹಬ್ಬಕ್ಕೆ ನಾದಬ್ರಹ್ಮ ಚಾಲನೆ

0
17

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಖ್ಯಾತ ಸಂಗೀತ ನಿದೇರ್ಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ಉದ್ಘಾಟಿಸಿದರು. ವಿಶ್ವವಿಖ್ಯಾತ 414ನೇ ಮೈಸೂರು ದಸರಾ  ಮಹೋತ್ಸವಕ್ಕೆ ಭಾನುವಾರ ಅದ್ಧೂರಿ ಚಾಲನೆ ಸಿಕ್ಕಿದೆ.ಬೆಳ್ಳಿಯ ರಥದಲ್ಲಿ ಪ್ರತಿಷ್ಠಾಪಿಸಿದ್ದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಈ ಬಾರಿಯ ವೈಭವದ ದಸರಾ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ ಸಿಕ್ಕಿದೆ. ನಾದಬ್ರಹ್ಮ ಡಾ ಹಂಸಲೇಖರು ಜ್ಯೋತಿ ಬೆಳಗಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಬಾರಿಯ ದಸರೆಗೆ ಮುನ್ನುಡಿ ಬರೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ, ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Previous articleಭಾರತ ಪಾಕ್ ಪಂದ್ಯ ಬೆಟ್ಟಿಂಗ್: ಅಡ್ಡೆಗಳ ಮೇಲೆ ದಾಳಿ
Next articleTV ರಿಮೋಟ್ ಗಾಗಿ ಜಗಳ: ತಂದೆಯಿಂದ ಮಗನ ಹತ್ಯೆ