ಮೈಸೂರು ದಸರಾ ಮಹೋತ್ಸವ: ಸಿಎಂ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ

0
5

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.
ಈ ಬಾರಿಯ ನಾಡಹಬ್ಬ ಅ.3ರಿಂದ 12ರವರೆಗೆ ನಡೆಯಲಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Previous articleಆಳಂದನಲ್ಲಿ ಮತ್ತೊಂದು ಫೈರಿಂಗ್: ಯುವಕನ ಸ್ಥಿತಿ ಗಂಭೀರ
Next articleಶಿವಸೇನೆ ನಾಯಕ ಸಂಜಯ್ ರಾವತ್‌ಗೆ ಜೈಲು ಶಿಕ್ಷೆ