ಬೆಂಗಳೂರು: ಮಹಾರಾಜ ಟ್ರೋಫಿಯ ಫೈನಲ್ ಪಂದ್ಯ ಇಂದು ನಡೆಯಲಿದ್ದು, ಪ್ರಶಸ್ತಿಗಾಗಿ ಹುಬ್ಬಳ್ಳಿ ಟೈಗರ್ಸ್ ಮತ್ತು ಮೈಸೂರು ವಾರಿಯರ್ಸ್ ಸೆಣಸಾಟ ನಡೆಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳು ಕೂಡ ಬಲಿಷ್ಠ ಬ್ಯಾಟಿಂಗ್, ಬೌಲಿಂಗ್ ಪಡೆಯನ್ನು ಹೊಂದಿವೆ. ಹಾಗಾಗಿ ಈ ಪಂದ್ಯ ಕೂಡ ರೋಚಕ ಆಗುವುದರಲ್ಲಿ ಅನುಮಾನವಿಲ್ಲ.