ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ: ಸಂಸದ ಸ್ಥಾನ ವಾಪಸ್

0
11
ರಾಹುಲ್‌

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮೋದಿ ಉಪನಾಮ ಹೇಳಿಕೆ ಕುರಿತಾದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ಅಲ್ಲದೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಸಂಸತ್‌ ಸದಸ್ಯ ಸ್ಥಾನಮಾನವನ್ನು ಮರುಸ್ಥಾಪಿಸಿದೆ. ಪ್ರಕರಣ ಸಂಬಂಧ ಗುಜರಾತ್ ಹೈಕೋರ್ಟ್ ನೀಡಿದ್ದ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.

Previous articleಕತ್ತರಿಯಿಂದ ಯುವಕನಿಗೆ ಇರಿತ
Next articleಗ್ಯಾರೆಂಟಿ ಯೋಜನೆಗಳಿಗೆ ಎಸ್ಸಿಪಿ, ಟಿಎಸ್‌ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ