ಮೋದಿ, ಬೊಮ್ಮಾಯಿ ಮುಖ ತೋರಿಸಿದರೂ ವೋಟು ಬರಲ್ಲ: ಕಾಂಗ್ರೆಸ್‌ ವ್ಯಂಗ್ಯ

0
25
BJP

ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್‌ ವ್ಯಂಗ್ಯಮಾಡಿದೆ.
ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಬಿ.ಎಸ್‌. ಯಡಿಯೂರಪ್ಪ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಹೇಳಿದೆ.

Previous articleಅಪ್ರಾಪ್ತೆಯರ ಗರ್ಭಧಾರಣೆ ಪ್ರಕರಣದಲ್ಲಿ ಹೆಚ್ಚಳ
Next articleಬಂಡೀಪುರ ಟೈಗರ್‌ ಸಫಾರಿ ಬಂದ್‌: ಹೋಂ ಸ್ಟೇ, ರೆಸಾರ್ಟ್‌ಗೂ ನಿಷೇಧ