ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಇಲ್ಲ

0
18

ಬೆಂಗಳೂರು: ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ವಿಧಿಸುವುದನ್ನು ನಿಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಗೌರವಿಸಿ ಮಾತನಾಡಿ ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ. ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ. ಇನ್ನುಮುಂದೆ ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ವಿಧಿಸುವುದನ್ನು ನಿಲ್ಲಿಸಲಾಗುವುದು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದರು.

Previous articleಸಚಿವ‌ ರಹೀಂ ಖಾನ್ ಅವರಿಂದ ಇಂದಿರಾ ಕ್ಯಾಂಟೀನ್ ವೀಕ್ಷಣೆ
Next articleಯೋಧರ ಕಲ್ಯಾಣಕ್ಕೆ ನಿಗಮ ಸ್ಥಾಪಿಸಲು ಚಿಂತನೆ