Home Advertisement
Home ತಾಜಾ ಸುದ್ದಿ ರಜೆ ಕೊಡುವ ಬಗ್ಗೆ ಯಾರೂ ಹೇಳುವ ಅವಶ್ಯಕತೆ ಇಲ್ಲ

ರಜೆ ಕೊಡುವ ಬಗ್ಗೆ ಯಾರೂ ಹೇಳುವ ಅವಶ್ಯಕತೆ ಇಲ್ಲ

0
87

ಬೆಂಗಳೂರು: ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಹೇಳಿಕೊಡಬೇಕಿಲ್ಲ, ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಸರ್ಕಾರಿ ರಜೆ ನೀಡಲು ನಿರಾಕರಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕರ್ನಾಟಕ ರಾಜ್ಯದಲ್ಲೂ ನಾಳೆ ರಜೆ ಘೋಷಿಸಬೇಕು ಎಂಬ ಬಿಜೆಪಿ ಆಗ್ರಹ ಕುರಿತು ಪ್ರತಿಕ್ರಿಯಿಸಿರುವ ಅವರು, ನಾವು ಭಕ್ತಿ, ಗೌರವ, ಧರ್ಮ ಪ್ರಚಾರಕ್ಕೆ ಮಾಡುವುದಿಲ್ಲ. ದೇವಸ್ಥಾನಗಳಲ್ಲಿ ಏನು ಆಚರಣೆ ಮಾಡಬೇಕು ಮಾಡುತ್ತಾರೆ. ಏನು ಪೂಜೆ, ಪುನಸ್ಕಾರ ಮಾಡಬೇಕು ಅದನ್ನು ಮಾಡುತ್ತೇವೆ. ನಮಗೆ ಯಾರೂ ಹೇಳುವ ಅವಶ್ಯಕತೆ ಇಲ್ಲ ಎಂದರು.