ಬೆಂಗಳೂರು: ರಾಜಕಾರಣದಿಂದ ಗೌರವಯುತವಾಗಿ ನಿವೃತ್ತಿನಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿಯನ್ನು ಘೋಷಿಸಿದರು.
ಹುಟ್ಟೂರು ಶ್ರೀನಿವಾಸಪುರ ತಾಲ್ಲೂಕು ಅಡ್ಡಗಲ್ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಣ ಪಡೆದು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ನನೆಗೆ ಮೋಸ ಮಾಡಿ ಸೋಲಿಸಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ. ಅವರು ಸರ್ವನಾಶವಾಗುತ್ತಾರೆ. ಆದರೆ ತಾನು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಣೆ ಮಾಡಿದರು. ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ ಎಂದು ತಿಳಿಸಿದರು.