Home Advertisement
Home ಅಪರಾಧ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

0
78

ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್‌ನಿ‌ಂದ ರಸ್ತೆ ಮಧ್ಯೆ ಕಾರೊಂದು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಬೂದಿಯಾಗಿದೆ. ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಸುಟ್ಟು ಕರಕಲಾಗಿದೆ.
ಬೆಂಕಿ ಕಾಣಿಸಿಕೊಳ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಡೂರು ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.