Home Advertisement
Home ತಾಜಾ ಸುದ್ದಿ ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ

ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ

0
125

ಬೆಂಗಳೂರು: ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ಬೆಲೆ‌ ಏರಿಕೆ ನೀತಿ ಖಂಡಿಸಿ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಬಾಬಾ ಸಾಹೇಬರನ್ನು ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ಸುಳ್ಳಿನ ಕಾರ್ಖಾನೆ ಆರ್.ಎಸ್.ಎಸ್ ನ ಸುಳ್ಳುಗಳ ವಿರುದ್ಧ ನಾವು ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು.

ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?

ಹಾಲಿನ ಬೆಲೆ 4 ರೂ ಹೆಚ್ಚಳ ಮಾಡಿರುವುದು ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.

Previous articleವಕ್ಫ್ ಪ್ರತಿಭಟನೆ ನೆಪದಲ್ಲಿ ಕೇಸರಿ ಬಂಟಿಂಗ್ಸ್‌ ತೆರವು ಖಂಡನೀಯ
Next articleಮತ್ತೆ ಬರಲಿದ್ದಾನೆ ಗುಂಡ…