ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಗೆ ಕೊಕ್ ನೀಡಿದ ಸಿಎಂ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ11 ಮಂದಿ ಮೃತಪಟ್ಟು, 47 ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಸ್ವತಃ ಸಿದ್ಧರಾಮಯ್ಯನವರೇ ಪತ್ರದ ಮೂಲಕ ಆದೇಶ ಹೊರಡಿಸಿದ್ದಾರೆ. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ನಿಂಬಾಳ್ಕರ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರವಿಕುಮಾರ್ ಅವರನ್ನು ಗುಪ್ತಚರ ವಿಭಾಗದ ಮುಖ್ಯಸ್ಥರನ್ನಾಗಿ ತತ್‌ಕ್ಷಣದಿಂದಲೇ ಜಾರಿಯಾಗುವಂತೆ ನೇಮಕ ಮಾಡಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿಂಬಾಳ್ಯರ್ ತಲೆದಂಡಕ್ಕೆ ಸ್ವತಃ ಸಚಿವರಿಂದಲೇ ಒತ್ತಡ ಕೇಳಿಬಂದಿತ್ತು.