ರಾಜಕೀಯ ನಿಲುವಿನಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ

0
17
CM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ಹೊರ ವಲಯದ ಖಾಸಗಿ ರೇಸಾರ್ಟ್​​ನಲ್ಲಿ ಭೇಟಿಯನ್ನು ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಎಂಬಂತೆ ಬಿಂಬಿಸಿ ರಾಜಕಾರಣದಲ್ಲಿ ನಡೆಯುತ್ತಿರುವ ಚರ್ಚೆಗೆ ಇಂದು ಬೊಮ್ಮಾಯಿವರು ಸಾಮಾಜಿಕ ಜಾಲತಾಣದಲ್ಲಿ ಟ್ವೇಟ್‌ ಒಂದನ್ನು ಮಾಡಿ ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದಿದ್ದಾರೆ. ಅವರ ಟ್ವೀಟ್‌ ಸಂದೇಶದಲ್ಲಿ “ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ. ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ‌ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದಿದ್ದಾರೆ.

Previous articleರಾಷ್ಟ್ರೀಯ ಹೆದ್ದಾರಿ ಸುಂಕ ಪಾರದರ್ಶಕತೆ ಅಗತ್ಯ
Next articleಬೆಲೆ ಏರಿಕೆಯನ್ನೇ ‘ಅಧಿಕೃತ ವ್ಯವಹಾರ’ ಮಾಡಿಕೊಂಡಿವೆ