ನವದೆಹಲಿ: ಚುನಾವಣಾ ಕಾರ್ಯಕ್ಕೆ ಯಾವುದೇ ಕಾರಣಕ್ಕೂ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ತಿಳಿಸಿದರು.
ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಬದುಕಿನ ಮೇಲೆ ವಾಗ್ದಾಳಿ ನಡೆಸುವುದು, ಜಾತಿ, ಧರ್ಮದ ಪ್ರಚಾರ ಮಾಡುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದರು.
ಅಲ್ಲದೇ ಎಲ್ಲೇ ಹಲಿಕಾಪ್ಟರ್, ಖಾಸಗಿ ವಿಮಾನ ಲ್ಯಾಂಡ್ ಆದರೂ ಪರಿಶೀಲಿಸಲಾಗುವುದು. ಚುನಾವಣಾ ಕಾರ್ಯಕ್ಕೆ ಯಾವುದೇ ಕಾರಣಕ್ಕೂ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ದೇಶಾದ್ಯಂತ 2100 ವಿಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.