Home Advertisement
Home ತಾಜಾ ಸುದ್ದಿ ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ

ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ

0
113

ನವದೆಹಲಿ: ರಾಜ್ಯಸಭೆ‌ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ತನ್ನ ಅಧಿಕೃತ ಖಾತೆಯಲ್ಲಿ ವೀಷಯವನ್ನು ಹಂಚಿಕೊಂಡಿದೆ. ರಾಜಸ್ಥಾನದಿಂದ ಸೋನಿಯಾ ಗಾಂಧಿ, ಬಿಹಾರದಿಂದ ಡಾ.ಅಖಿಲೇಶ್ ಪ್ರಸಾದ್ ಸಿಂಗ್ ಹಾಗೂ ಮಹಾರಾಷ್ಟ್ರದಿಂದ ಚಂದ್ರಶೇಖರ್ ಹಂದೋರೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಲು ತೀರ್ಮಾನಿಸಲಾಗಿದೆ. ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಫೆ. 15 ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ 27 ರಂದು ಚುನಾವಣೆ ನಿಗದಿಯಾಗಿದೆ.

Previous articleಕನ್ನಡಿಗರ ತೆರಿಗೆ ಹಣದಲ್ಲಿ ದೆಹಲಿ ಜಾತ್ರೆ
Next articleವಾಹನ ಸವಾರರಿಗೆ ಸಿಹಿ ಸುದ್ದಿ​: HSRP ನಂಬರ್​ ಪ್ಲೇಟ್​​ ಅಳವಡಿಸುವ ಅವಧಿ ವಿಸ್ತರಣೆ