Home Advertisement
Home ತಾಜಾ ಸುದ್ದಿ ರಾಜೀನಾಮೆ ಪಡೆದು ಫುಲ್ ಟೈಮ್ ಪಕ್ಷದ ಕೆಲಸ ಮಾಡಲು ಹೇಳಿ…

ರಾಜೀನಾಮೆ ಪಡೆದು ಫುಲ್ ಟೈಮ್ ಪಕ್ಷದ ಕೆಲಸ ಮಾಡಲು ಹೇಳಿ…

0
50

ಬೆಂಗಳೂರು: ನಿಮಗೆ ರಾಜ್ಯದ ಮಕ್ಕಳ ಭವಿಷ್ಯಕ್ಕಿಂತ ಚುನಾವಣೆಯೇ ಮುಖ್ಯವಾದರೆ ಶಿಕ್ಷಣ ಸಚಿವರಿಂದ ರಾಜೀನಾಮೆ ಪಡೆದು ಫುಲ್ ಟೈಮ್ ಪಕ್ಷದ ಕೆಲಸ ಮಾಡಲು ಹೇಳಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು 5, 8, 9 and 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುತ್ತೇವೆ ಎಂದು ಯಾವುದೇ ಪೂರ್ವಸಿದ್ಧತೆ, ಮುಂದಾಲೋಚನೆ ಇಲ್ಲದೆ ಧಿಡೀರ್ ಆದೇಶ ಹೊರಡಿಸಿದ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಎಡಬಿಡಂಗಿ ನಿರ್ಧಾರದಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಅತಂತ್ರವಾಗಿದ್ದು, ಪರೀಕ್ಷೆಗಳ ದಿನಾಂಕ ಪದೇ ಪದೇ ಬದಲಾಗುತ್ತಿರುವುದರಿಂದ ಪೋಷಕರು ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ.
ಶಿಕ್ಷಣ ಇಲಾಖೆ ಇಷ್ಟೊಂದು ದೊಡ್ಡ ಗೊಂದಲದ ಗೂಡಾಗಿರುವ ಸಂದರ್ಭದಲ್ಲಿ ಸಮಸ್ಯೆಗೆ ಪರಿಷ್ಕಾರ ಹುಡುಕಿ ಪೋಷಕರಿಗೆ, ವಿಧ್ಯಾರ್ಥಿಗಳಿಗೆ ಧೈರ್ಯ ತುಂಬುವುದು ಬಿಟ್ಟು, ಸಹೋದರಿಯ ಚುನಾವಣೆಯಲ್ಲಿ ಸಂಪೂರ್ಣ ಮಗ್ನರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಅವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಮುಂದುವರೆಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ನಿಮಗೆ ರಾಜ್ಯದ ಮಕ್ಕಳ ಭವಿಷ್ಯಕ್ಕಿಂತ ಚುನಾವಣೆಯೇ ಮುಖ್ಯವಾದರೆ ಶಿಕ್ಷಣ ಸಚಿವರಿಂದ ರಾಜೀನಾಮೆ ಪಡೆದು ಫುಲ್ ಟೈಮ್ ಪಕ್ಷದ ಕೆಲಸ ಮಾಡಲು ಹೇಳಿ. ಕಳೆದ 9 ತಿಂಗಳಿನಿಂದ ಪದೇ ಪದೇ ಎಡವಟ್ಟುಗಳ ಮೇಲೆ ಎಡವಟ್ಟುಗಳನ್ನು ಮಾಡುತ್ತಿದ್ದರೂ ಶಿಕ್ಷಣ ಸಚಿವರ ಮೇಲೆ ಯಾವ ಕ್ರಮ ಕೈಗೊಳ್ಳಲಾಗದ ನಿಮ್ಮ ಪರಿಸ್ಥಿತಿ ನೋಡಿದರೆ ತಾವು ಅಸಹಾಯಕರಾಗಿದ್ದೀರಿ ಅನ್ನಿಸುತ್ತಿದೆ ಎಂದಿದ್ದಾರೆ.

Previous articleಪ್ರಣಾಳಿಕೆ ಅಂಗೀಕಾರ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
Next articleವಿಡಿಯೋ ಆಧರಿಸಿ ಕೀಡಿಗೇಡಿ ಗೂಂಡಾಗಳೆಲ್ಲರನ್ನೂ ಬಂಧಿಸಿ