ರಾಜ್ಯಕ್ಕೆ ಹೆಮ್ಮೆ ತಂದ ಕನ್ನಡತಿ ಚೈತ್ರಾ

0
30

ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಕ್ರೀಡಾಪಟು ಕರ್ನಾಟಕದ ಆಟಗಾರ್ತಿ ಚೈತ್ರಾ

ಬೆಂಗಳೂರು: ಭಾರತದ ಮಹಿಳಾ ಖೋ ಖೋ ತಂಡ ನೇಪಾಳವನ್ನು 78-40 ಅಂಕಗಳಿಂದ ಸೋಲಿಸಿ  2025ರ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಅಭಿನಂದನೆ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಅಭಿನಂದನೆಗಳು.
ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ.

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೊ-ಖೊ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿ.
ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನ ಎಂದಿದ್ದಾರೆ.

ಕನ್ನಡತಿ ಚೈತ್ರಾ: ಮಹಿಳೆಯರ ಖೋ ಖೋ ತಂಡದಲ್ಲಿರುವ ಒಟ್ಟು 15 ಜನ ಸದಸ್ಯರಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಕ್ರೀಡಾಪಟು ಕರ್ನಾಟಕದ ಆಟಗಾರ್ತಿ ಚೈತ್ರಾ.   ಮೈಸೂರಿನ ತಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ರೈತನ ಮಗಳು.

Previous articleಧರ್ಮೋ ರಕ್ಷತಿ ರಕ್ಷಿತಃ
Next articleಎಷ್ಟು ಭಾಗ್ಯ ನೀಡಿದರೇನು?