ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ಇಂದು ಮುಂಜಾನೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ನೇತೃತ್ವದಲ್ಲಿ ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕಾಗಿ ಆಹ್ವಾನಿಸಿದರು. ಈ ಅವಿಸ್ಮರಣೀಯ ಸಂದರ್ಭವನ್ನು ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.