ರಾಯಚೂರಿಗೆ ಎನ್‌ಡಿಆರ್‌ಎಫ್ ತಂಡ ಆಗಮನ

0
20
ಎನ್‌ಡಿಆರ್‌ಎಫ್

ರಾಯಚೂರು: ಪ್ರವಾಹ ಹಾಗೂ ಮಳೆಯಿಂದ ಜನರ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪೋರ್ಸ್(ಎನ್‌ಡಿಆರ್‌ಎಫ್) ತಂಡವು ತಾಲ್ಲೂಕಿನ ಶಕ್ತಿನಗರಕ್ಕೆ ಶುಕ್ರವಾರ ಆಗಮಿಸಿದ್ದು, ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದೆ.
ಈ ತಂಡದಲ್ಲಿ ಇಬ್ಬರು ಇನ್ಸಪೆಕ್ಟರ್ 18 ನುರಿತ ರಕ್ಷಣ ಸದಸ್ಯರಿದ್ದಾರೆ. ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನಿರ್ದೇಶನದಂತೆ ರಾಯಚೂರು ಜಿಲ್ಲೆ ಮತ್ತು ಬಳ್ಳಾರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ತಕ್ಷಣ ರಕ್ಷಣಾ ಕಾರ್ಯಚರಣೆಗೆ ಸಿದ್ದವಾಗಿರುತ್ತದೆ.
20 ಸದಸ್ಯರನ್ನೊಳಗೊಂಡ ಎನ್‌ಡಿಆರ್‌ಎಫ್ ಇನ್ನೊಂದು ತಂಡವು ಲಿಂಗಸುಗೂರು ತಾಲೂಕಿನ ಅಮರೇಶ್ವರ ಗ್ರಾಮದಲ್ಲಿ ವಾಸ್ತವ್ಯ ಹೂಡಿದೆ. ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

Previous articleವಿಘ್ನವಿನಾಶಕನಿಗೆ ಅದ್ಧೂರಿ ಬೀಳ್ಕೊಡುಗೆ
Next articleಬಬಲೇಶ್ವರ ಕ್ಷೇತ್ರದಲ್ಲಿ ಬೆಳೆಹಾನಿ ಸರ್ಕಾರ ರೈತರ ನೆರವಿಗೆ ಬರಲಿ: ಹೊನವಾಡ