ಬೆಂಗಳೂರು: ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ನ.24ರಂದು ಪರೀಕ್ಷೆ ನಡೆದಿದ್ದು, ಅದಾದ 19 ದಿನಗಳಲ್ಲೇ ಅಂಕಗಳ ಪಟ್ಟಿ ಪ್ರಕಟಿಸಲಾಗಿದೆ. 16 ವಿಷಯಗಳ 24 ಹುದ್ದೆಗಳಿಗೆ ಒಟ್ಟು 1,175 ಮಂದಿ ಪರೀಕ್ಷೆ ಬರೆದಿದ್ದರು. ಅಷ್ಟೂ ಮಂದಿ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪಡೆದ ಅಂಕಗಳ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಡಿ.14ರೊಳಗೆ ಸಲ್ಲಿಸಬೇಕು. ಅಂಕಪಟ್ಟಿ ಜತೆಗೆ ಅಂತಿಮ ಕೀ ಉತ್ತರಗಳನ್ನೂ ಬಿಡುಗಡೆ ಸಹ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.