SK Home Ad
Home ತಾಜಾ ಸುದ್ದಿ ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಮೋದಿ

ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಮೋದಿ

0
111

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ರಾಷ್ಟ್ರಪತಿ ಅವರು ವಿಷಯ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿಗಳು ಹಾಗೂ ಅವರ ಸಂಪುಟ ಸದಸ್ಯರ ರಾಜೀನಾಮೆ ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸಚಿವ ಮಂಡಳಿಗೆ ಮನವಿ ಮಾಡಿದರು.

ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ದೆಹಲಿಯಲ್ಲಿ ಪ್ರಧಾನಿ ನಿವಾಸದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು.