Home Advertisement
Home ತಾಜಾ ಸುದ್ದಿ ರಿಷಬ್ ಶೆಟ್ಟಿಗೆ ದೈವದ ಅಭಯ

ರಿಷಬ್ ಶೆಟ್ಟಿಗೆ ದೈವದ ಅಭಯ

0
133

ಮಂಗಳೂರು: ನಟ, ನಿರ್ದೇಶಕ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ನೇಮಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.
ಭಾನುವಾರ ಬೆಂಗಳೂರಿನಿಂದ ಮಂಗಳೂರಿಗೆ ಹೆಂಡತಿ ಮಕ್ಕಳೊಂದಿಗೆ ಆಗಮಿಸಿದ ರಿಷಬ್ ಶೆಟ್ಟಿ ನಗರದ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ನೇಮೋತ್ಸವದಲ್ಲಿ ರಾತ್ರಿಯಿಂದ ಬೆಳಿಗ್ಗೆಯವರೆಗೂ ಪಾಲ್ಗೊಂಡಿದ್ದರು
ಈ ವೇಳೆ ವಾರಾಹಿ ಪಂಜುರ್ಲಿ ದೈವದ ಬಳಿ ನಟ ತನ್ನ ಕಷ್ಟ ಹೇಳಿಕೊಂಡಿದ್ದಾರೆ. ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ‘ನಿನಗೆ ಶತ್ರುಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈ ಬಿಡುವುದಿಲ್ಲ, ಯಾರು ನಿನಗೆ ಕೇಡು ಬಗೆದಿದ್ದಾರೆಂದು ಈಗ ಹೇಳುವುದಿಲ್ಲ, ನೋಡಿಕೊಳ್ಳುತ್ತೇನ. ‘ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ಎಂದು ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವ ಅಭಯ ನೀಡಿದೆ.

Previous articleಇಬ್ಬರು ನಕ್ಸಲ್ ನಾಯಕರು ನ್ಯಾಯಾಲಯಕ್ಕೆ
Next articleನಾಳೆ ದ್ವಿತೀಯ ಪಿಯುಸಿ ಫಲಿತಾಂಶ