ರೈತರ ಬೇಡಿಕೆಗಳ ಈಡೇರಿಕೆಗೆ ಪ್ರಥಮ ಆದ್ಯತೆ

0
28

ರೈತ ಸಂಘದ ಮುಖಂಡರೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ

ಬೆಂಗಳೂರು: ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರೈತ ಸಂಘದ ಮುಖಂಡರು ಭೇಟಿಮಾಡಿದರು, ಅವರೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ, ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಮುಖ್ಯಮಂತ್ರಿಗಳು ರೈತರಿಗೆ ಮನವರಿಕೆ ಮಾಡಿಕೊಟ್ಟರು.

Previous articleಸಾಲಬಾಧೆಯಿಂದ ಬೇಸತ್ತು ಮಗ್ಗದ ಬಳಿಯೇ ನೇಕಾರ ಆತ್ಮಹತ್ಯೆ
Next articleಪಾಲಿಕೆಯಲ್ಲಿ ವಾಕ್ಸಮರ: ಬಿಜೆಪಿ ನಾಯಕರಿಂದ ʼಕಳ್ಳʼ ಪದ ಬಳಕೆ