ರೈತರ ಹಿತಕಾಯಲು ರಾಜ್ಯ ಸರ್ಕಾರ ಬದ್ದ

0
39

ಮಂಡ್ಯ: ಕಾವೇರಿ ನದಿ ನೀರಿನ ಹಂಚಿಕೆ ಸಂಕಷ್ಟ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದು‌ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು.
ಭಾರತ ಸರ್ಕಾರದ ಆಹಾರ ಸಂಸ್ಕರಣಾ ಮಂತ್ರಾಲಯ , ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ,ಕರ್ನಾಟಕ ಕೃಷಿ ವಾಣಿಜ್ಯ ಅಭಿವೃದ್ಧಿ ನಿಗಮ, ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಭಾಗಿತ್ವದಲ್ಲಿ ಮಂಡ್ಯದ ಡಾ.ರಾಜ್ ಕುಮಾರ್ ಬಡಾವಣೆ ಮೈದಾನದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ ಮೇಳ, ವಸ್ತು ಪ್ರದರ್ಶನ ಹಾಗೂ ಬೆಲ್ಲದ ಪರಿಷೆ ಉದ್ಘಾಟಿಸಿ ಅವರು ಮಾತನಾಡಿದರು.
ಕಡಿಮೆ ನೀರಿನ ಬಳಕೆ ಮೂಲಕ ಕೃಷಿ ಮಾಡುವುದು, ಅಂತರ್ಜಲ ಹೆಚ್ಚಿಸುವ ಪ್ರಯತ್ನಗಳನ್ನೂ ನಾವು ಮಾಡಬೇಕಿದೆ. ಕೃಷಿ ಹೊಂಡ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ರೈತರ ಬದುಕು ‌ಹಸನಾಗಬೇಕೆಂಬುದು ನಮ್ಮ ಆಶಯ ಅದಕ್ಕೆ ಪೂರಕವಾದ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು. ಜಿಲ್ಲೆಯ ಜನರು, ಸ್ವಾಮೀಜಿಯವರು ಹಾಗೂ ಪಕ್ಷದ ವರಿಷ್ಠರ ಆಶೀರ್ವಾದದಿಂದ ಸ್ವಾತಂತ್ರ್ಯಾ ನಂತರ ಮಂಡ್ಯ ಜಿಲ್ಲೆಗೆ ಇದೇ ಮೊದಲ ಬಾರಿಗೆ ಕೃಷಿ ಸಚಿವ ಸ್ಥಾನ ದೊರೆತಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಇಂದು ಸಿರಿ ಧಾನ್ಯದ ಬಗ್ಗೆ ವಿಶ್ವದಲ್ಲೇ ವ್ಯಾಪಕ ಚರ್ಚೆ ನಡೆಯುತ್ತಿದೆ ಹಿಂದೊಮ್ಮೆ ಬಡವರ ಆಹಾರವಾಗಿದ್ದ ಸಿರಿಧಾನ್ಯ ಇಂದು ಸರಿವಂತರ ಆಯ್ಕೆಯಾಗುತ್ತಿದೆ. ಪ್ರಪಂಚದ ಅತ್ಯಂತ ಅವಶ್ಯಕ ಧಾನ್ಯ ವಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಬಾಯಲ್ಲಿ ನೀರಿಳಿಸಿದ ಬೆಲ್ಲದ ಪರಿಷೆ
ಬೆಲ್ಲದಿಂದ ಮಾಡಿದ್ದ ವಿವಿಧ ಬಗೆಯ ಸಿಹಿ ತಿನಿಸುಗಳಿಂದ ತುಂಬಿದ್ದ ಬೆಲ್ಲದ ಪರಿಷೆ ಕೂಡ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಸಾರ್ವಜನಿರು ಈ ಎಲ್ಲಾ ತಿನಿಸುಗಳನ್ನು ಮುಗಿ ಬಿದ್ದು ಖರೀದಿಸಿ ಆಸ್ವಾದಿಸಿದರು.

ಎತ್ತಿನ ಗಾಡಿಯಲ್ಲಿ ಬಂದ ಸಚಿವರು,ಸ್ವಾಮೀಜಿ.
ಕೃಷಿ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಮಂಡ್ಯದಲ್ಲಿ ಏರ್ಪಡಿಸಿರುವ ಸಿರಿಧಾನ್ಯ ಮೇಳ ಹಲವು ವಿಭಿನ್ನತೆಯಿಂದ ಗಮನ ಸೆಳೆಯಿತು . ಸಚಿವರು,ಸ್ವಾಮೀಜಿ, ಗಣ್ಯರಿಗೆ ಪೂರ್ಣಕುಂಭ ಸ್ವಾಗತದ ಜೊತೆಗೆ ಎತ್ತಿನ ಬಂಡಿಯಲ್ಲಿ ಕೂರಿಸಿ ಮೆರವಣಿಗೆಯಲ್ಲಿ ಕರೆತರಲಾಯಿತು. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರೇ ಎತ್ತಿನ ಗಾಡಿ ಚಾಲಾಯಿಸಿದ್ದು  ವಿಶೇಷವಾಗಿತ್ತು

Previous articleಕಾಂಗ್ರೆಸ್ ಪಕ್ಷ ಸೇರಲ್ಲ
Next articleಸ್ವಾತಂತ್ರ್ಯ ಹೋರಾಟದಲ್ಲಿ ಸಂಯುಕ್ತ ಕರ್ನಾಟಕಕ್ಕೆ ಮುಂಚೂಣಿ ಸ್ಥಾನ