ಲಂಚ ಸ್ಚೀಕಾರ ಆರೋಪ: ಸಹಾಯಕ ಸರ್ಕಾರಿ ಅಭಿಯೋಜಕ ಬಂಧನ

0
51

ಉಡುಪಿ: ಇಲ್ಲಿನ ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕ ಎಂಬವರನ್ನು ಉಡುಪಿ ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಮರಳು ಸಾಗಾಟ ವಾಹನದ ಬಿಡುಗಡೆ ಸಂಬಂಧ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಗಣಪತಿ ನಾಯ್ಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್.ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಐ ನಾಗೇಶ್ ಉಡುಪ, ಸಿಬ್ಬಂದಿ ನಾಗರಾಜ್, ಸತೀಶ್ ಹಂದಾಡಿ, ರೋಹಿತ್, ಮಲ್ಲಿಕಾ, ಪುಷ್ಪಾವತಿ, ರವೀಂದ್ರ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ, ರಾಘವೇಂದ್ರ ಹೊಸಕೋಟೆ, ಸುಧೀರ್, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು.

Previous articleಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿ ಜಪ್ತಿ, ಬಂಧನ
Next articleಹಿಮಾಲಯದಿಂದ ರಾಜಕೀಯದವರೆಗಿನ ಪಯಣ: ಯೋಗಿ ಆದಿತ್ಯನಾಥ್ ಬಯೋಪಿಕ್