ಲಿಂಗಾಯತರಿಗೆ ಅನ್ಯಾಯವಾಗಿಲ್ಲ

0
20
ಸಿದ್ದು

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಎನ್ನುವುದನ್ನು ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲರಿಗೂ ನ್ಯಾಯ ದೊರಕಿಸುವ ಕೆಲಸ ಮಾಡಲಾಗಿದೆ ಎಂದು ಪ್ರತಿಪಾದಿಸಿದರು.
ಬೆಳಗಾವಿಯಲ್ಲಿ ಕುರುಬರ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ದಾವಣಗೆರೆಯ ವೀರಶೈವ ಲಿಂಗಾಯತ ಸಮಾಜದ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಆರೋಪ ಕುರಿತು ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿಗಳು ಈ ಸಮಜಾಯಿಷಿ ನೀಡಿದರು.
ನಮ್ಮ ಸರ್ಕಾರ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಈ ಬಗ್ಗೆ ಶಾಮನೂರು ಅವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಹೇಳಿದರು. ರಾಜ್ಯದಲ್ಲಿ ಕೋಮು ಗಲಭೆಯನ್ನು ತಕ್ಷಣ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತದೆ. ಯಾರೇ ಕೋಮು ಗಲಭೆ ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Previous articleರಾಜ್ಯದಲ್ಲೂ ಜಾತಿ ಜನಗಣತಿ ವರದಿ ಬಿಡುಗಡೆ ಒಳ್ಳೆಯದು
Next articleಬೀದರ್‌ಗೆ ಆಗಮಿಸಿದ ಪ್ರಧಾನಿ ಮೋದಿ: ಬಿಜೆಪಿ ನಾಯಕರಿಂದ ಸ್ವಾಗತ