ಬೆಂಗಳೂರು: ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಇಬ್ಬರು ಎಸ್‌ಪಿಪಿಗಳು ರೇವಣ್ಣರಿಗೆ ಜಾಮೀನು ನೀಡದಂತೆ ಪ್ರಬಲ ವಾದ ಮಂಡಿಸಿದ್ದರು. ಎಸ್‍ಪಿಪಿಗಳ ವಾದಕ್ಕೆ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್ ಅವರು ಪ್ರಬಲ ಪ್ರತಿವಾದ ಸಲ್ಲಿಸಿದ್ದರು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದು, ಇಂದು ತೀರ್ಪು ಪ್ರಕಟಿಸಿದ್ದಾರೆ.
42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ.