ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನ ಸೇರಿದಂತೆ ರಾಜ್ಯಗಳಾದ್ಯಂತ 43 ಅಭ್ಯರ್ಥಿಗಳನ್ನು ಘೋಷಿಸಿದೆ.
ಅಸ್ಸಾಂನ ಜೋರ್ಹತ್‌ನಿಂದ ಗೌರವ್ ಗೊಗೊಯ್, ಚಿಂದ್ವಾರದಿಂದ ಕಮಲ್ ನಾಥ್ ಪುತ್ರ ನಕುಲ್‌ನಾಥ್ ಸ್ಪರ್ಧಿಸಲಿದ್ದಾರೆ. ಆದರೆ, ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಒಂದೇ ಒಂದು ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಘೋಷಿಸಿಲ್ಲ.
























