ಬೆಂಗಳೂರು: ಜೆಡಿಎಸ್ ಜೊತೆಗಿನ ಮೈತ್ರಿಯಿಂದ ನಮಗೆ ಶಕ್ತಿ ಬರುತ್ತೆ ಎಂದು ಯಡಿಯೂರಪ್ಪ ಹೇಳಿದ್ದಾರೆ, ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಅಮಿತ್ ಶಾ ಒಪ್ಪಿದ್ದಾರೆ. ನಾಲ್ಕು ಸ್ಥಾನ ಬಿಟ್ಟುಕೊಡಲು ಅವರು ಹೇಳಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿಯಿಂದ ನಮಗೆ ಶಕ್ತಿ ಬರುತ್ತೆ ಎಂದು ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.