ವಕೀಲರು-ಪೊಲೀಸರ ಮಧ್ಯೆ ವಾಗ್ವಾದ

0
11

ಕಲಬುರಗಿ: ಸರ್ಕಾರ ವಕೀಲರಗಳ ರಕ್ಷಣೆಗೆ ಕಾನೂನು ತರಬೇಕೆಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಲಬುರಗಿ ಜಿಲ್ಲಾ ನ್ಯಾಯವಾದಿಗಳ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಮಾಡಿದರು.
ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿಗಳೇ ಬರಬೇಕೆಂದು ಪಟ್ಟು ಹಿಡಿದು ಕುಳಿತುಕೊಂಡಿರುವ ನ್ಯಾಯವಾದಿಗಳು ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಲು ಬರದೇ ಇರುವುದನ್ನು ಖಂಡಿಸಿ ವಕೀಲರುಗಳೆಲ್ಲ ರಸ್ತೆಗಿಳಿದು ರಸ್ತೆ ಬಂದ್ ಮಾಡಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ವಕೀಲರುಗಳು ಸೇರಿಕೊಂಡು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಸ್ತೆ ಮೇಲೆ ಟೈರ್‌ಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ನೀರು ಹಾಕಿ ಬೆಂಕಿ ಆರಿಸಲು ಮುಂದಾದಾಗ ವಕೀಲರಗಳು ಪೊಲೀಸ್ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಲು ಮುಂದಾದಾಗ ಸ್ಥಳದಿಂದ ಓಡಿ ಹೋದ ಪೊಲೀಸ್ ಸಿಬ್ಬಂದಿಯನ್ನು ಬೆನ್ನಟ್ಟಿದ ಘಟನೆ ನಡೆಯಿತು.

Previous article46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ
Next articleಕೆರೆಗೆ ಹಾರಿ ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ