ವಯನಾಡು: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಮತ್ತು ಇತರ ಗಣ್ಯರೊಂದಿಗೆ ಭೂಕುಸಿತಕ್ಕೆ ಒಳಗಾದ ವಯನಾಡಿನ ಚೂರಲ್ ಮಾಲಾ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಧ್ವಂಸಗೊಂಡ ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಕುಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದರು.ಇದಾದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅವರು, ಘಟನೆ ಮತ್ತು ದುರಂತದಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಗಳ ಕುರಿತು ವಿವರಣೆ ಪಡೆಯಲಿದ್ದಾರೆ.