ಬೆಂಗಳೂರು: ರಾಜ್ಯ ಬಿಜೆಪಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.