ಲೈಂಗಿಕ ದೌರ್ಜನ್ಯ: ಸ್ವಯಂ ಚಾಟಿ ಏಟು

0
35

48 ದಿನಗಳ ಕಾಲ ಉಪವಾಸ ಸತ್ಯಾಗ್ರಹ, ಅಧಿಕಾರಿಗಳನ್ನ ಕೆಳಗಿಳಿಸುವವರೆಗೆ ಚಪ್ಪಲಿ ಧರಿಸುವುದಿಲ್ಲ.

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಶುಕ್ರವಾರ ಪ್ರತಿಭಟನೆಯ ಸಂಕೇತವಾಗಿ ಹಲವು ಬಾರಿ ಚಾಟಿ ಬೀಸಿಕೊಂಡಿದ್ದಾರೆ.
ಚೆನ್ನೈನ ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಡಿಎಂಕೆ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಡಿಎಂಕೆ ಸರ್ಕಾರ ಮತ್ತು ಪೊಲೀಸರು ಬಲಿಪಶುವಿನ ವೈಯಕ್ತಿಕ ವಿವರಗಳನ್ನು ಸೋರಿಕೆ ಮಾಡಿದ್ದಾರೆ ಮತ್ತು ಆಕೆಯ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದರು, ಇದು ಆಡಳಿತದ ಅಸಮರ್ಥತೆಯನ್ನು ಪ್ರತಿಬಿಂಬಿಸುವ “ನಾಚಿಕೆಗೇಡಿನ” ಕೃತ್ಯ, ಯಾವುದೇ ಸಂದರ್ಭದಲ್ಲೂ ಮಹಿಳೆಯರ ಸುರಕ್ಷತೆಗೆ ಧಕ್ಕೆಯಾಗಬಾರದು ಎಂದರು

48 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಮನವಿ ಮಾಡುತ್ತೇನೆ ಎಂದರು. ನಾಳೆಯಿಂದ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ನಾನು ಚಪ್ಪಲಿ ಧರಿಸುವುದಿಲ್ಲ.

Previous articleವೇವ್ಸ್ ಒಟಿಟಿ: ಒಂದು ತಿಂಗಳಲ್ಲಿ 1 ಮಿಲಿಯನ್ ಡೌನ್‌ಲೋಡ್‌
Next articleಭಾರತ ಆರ್ಥಿಕವಾಗಿ ಬೆಳೆಯಲು ಮನಮೋಹನ್ ಸಿಂಗ್ ಭದ್ರ ಬುನಾದಿ