ವಿದ್ಯುತ್ ದರ ಏರಿಕೆ ನಾವಲ್ಲ, ಹಿಂದಿನ ಸರ್ಕಾರ

0
23

ತುಮಕೂರು: ರಾಜ್ಯದಲ್ಲಿ ವಿದ್ಯುತ್​ ದರ ಏರಿಕೆ ಮಾಡಿದ್ದು ನಮ್ಮ ಸರ್ಕಾರ ಅಲ್ಲ. ಹಿಂದಿನ ಬಿಜೆಪಿ ಸರ್ಕಾರ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಹೇಳಿದರು. ನಗರದಲ್ಲಿ ಇಂದು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದಿಂದ ಯಾವುದೇ ಬಿಲ್ ಹೆಚ್ಚಳ ಮಾಡಿಲ್ಲ. ಮೀಟರ್ ಜಾಸ್ತಿ ಬಂದಾಗ ಅವರು ಕಟ್ಟಲೇಬೇಕು. ನಾವು ಯಾವುದೇ ಬಿಲ್ ಹೆಚ್ಚಿಸಿಲ್ಲ. ಹಿಂದಿನ ಸರ್ಕಾರ ಮಾಡಿದ್ದು ಅಷ್ಟೇ. ಎಲ್ಲಾ ಯೋಜನೆ ಮುಂದುವರೆಯಲಿದೆ. ಯಾವುದು ಕೂಡ ನಿಲ್ಲುವುದಿಲ್ಲ ಎಂದರು.

Previous articleವಿದ್ಯುತ್ ಬಿಲ್ ಕಟ್ಟಬೇಡಿ: ಸವದಿ ಸ್ಪಷ್ಟನೆ
Next articleರಸ್ತೆ ಅಪಘಾತ: ಇಬ್ಬರು ಮೃತ್ಯು, ನಾಲ್ವರು ಗಂಭೀರ