ವಿಧ್ವಂಸಕ ಕೃತ್ಯಕ್ಕೆ ಸಂಚು ಹಾಕಿದ್ದ ಐವರು ಶಂಕಿತ ಉಗ್ರರ ಬಂಧನ

0
22
ಬಂಧನ

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ನಗರದಲ್ಲಿ ವಿಧ್ವಂಸಕ ಕೃತ್ಯ ಸಂಚು ಹಾಕಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತ ಶಂಕಿತ ಉಗ್ರರು ನಗರದಲ್ಲಿ ದೊಡ್ಡ ಮಟ್ಟದ ಸ್ಫೋಟಕಕ್ಕೆ ಸಂಚು ರೂಪಿಸಿದ್ದ ಆರೋಪ ಮೇಲೆ ಕೇಂದ್ರ ಅಪರಾಧ ವಿಭಾಗದ-ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ಉಗ್ರರನ್ನು ಅರೆಸ್ಟ್ ಮಾಡಿದ್ದಾರೆ.
2017ರ ಅಕ್ಟೋಬರ್​ನಲ್ಲಿ ಬೆಂಗಳೂರಿನ ಆರ್​.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐದು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಮುದಾಸೀರ್, ಫೈಜಲ್ ರಬ್ಬಾನಿ, ಸುಹೇಲ್, ಉಮರ್ ಬಂಧಿತ ಆರೋಪಿಗಳು. ಇವರಿಗೆ ತರಬೇತಿ ನೀಡಿದ್ದ ಜುನೈದ್ ತಲೆಮರೆಸಿಕೊಂಡಿದ್ದು, ಬಂಧಿತರಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Previous articleಇಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ
Next articleಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ