ಸಿಡ್ನಿ: ಅಕ್ಟೋಬರ್ ೫ರಿಂದ ಆರಂಭವಾಗಲಿರುವ ೧೩ನೇ ಆವೃತ್ತಿಯ ಐಸಿಸಿ ವಿಶ್ವಕಪ್‌ಗೆ ಪಂದ್ಯಾವಳಿಗೆ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡ ತನ್ನ ೧೫ ಸದಸ್ಯರ ಸಂಭಾವ್ಯ ತಂಡವನ್ನು ಪ್ರಕಟಿಸಿದೆ. ಕಳೆದ ತಿಂಗಳು ೧೮ ಸದಸ್ಯರ ತಂಡವನ್ನು ಪ್ರಕಟಿಸಿತ್ತು. ಇದೀಗ ೧೫ ಮಂದಿಗೆ ಈ ತಂಡವನ್ನು ಇಳಿಸಿದೆ.
ಸ್ಟಾರ್ ವೇಗಿ ಪ್ಯಾಟ್ ಕಮಿನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ ೮ರಂದು ಆತಿಥೇಯ ಭಾರತ ವಿರುದ್ಧ ಆಡುವ ಮೂಲಕ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ತಂಡ ಭಾರತ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬೋಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮರ‍್ಷ್, ಗ್ಲೆನ್ ಮ್ಯಾಕ್ಸ್ವೆಲ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟರ‍್ಕ್, ಮರ‍್ಕಸ್ ಸ್ಟೊಯಿನಿಸ್, ಡೇವಿಡ್ ವರ‍್ನರ್, ಆ್ಯಡಂ ಜಂಪಾ.