Home Advertisement
Home ಅಪರಾಧ ವ್ಯಾಟ್ಸಪ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ ₹ 10 ಲಕ್ಷ ಕಳೆದುಕೊಂಡ…

ವ್ಯಾಟ್ಸಪ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ ₹ 10 ಲಕ್ಷ ಕಳೆದುಕೊಂಡ…

0
180

ಚಿಕ್ಕಮಗಳೂರು: ವ್ಯಾಟ್ಸಪ್ ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಳೆದುಕೊಂಡ ಘಟನೆ ನೆಡೆದಿದ್ದು ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.20ರಂದು ನಗರದ ವ್ಯಕ್ತಿಯೊಬ್ಬರಿಗೆ ವ್ಯಾಟ್ಸಪ್ ಗ್ರೂಪ್ ನಲ್ಲಿ ಪಿ.ಎಂ.ಕಿಸಾನ್ ಯೋಜನಾ. ಎಪಿಕೆ ಎಂಬ ಹೆಸರಿನಲ್ಲಿ ಪೋಸ್ಟ್ ಲಿಂಕ್ ಮಾಡಲಾಗಿದ್ದು, ಲಿಂಕ್ ಡೌನ್ ಲೋಡ್ ಮಾಡಿದ ಕೂಡಲೇ ವ್ಯಕ್ತಿಯ ಗಮನಕ್ಕೆ ಬರುವಷ್ಟರಲ್ಲಿ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 10.49ಲಕ್ಷ ರೂ. ಕೆಡಿತಗೊಂಡಿದೆ.

ಮಾ.22ರಂದು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾ ಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಎಪಿಕೆ( ಆಂಡ್ರಾಯ್ಡ್ ಪ್ಯಾಕೇಜ್) ಫೈಲ್ ವಂಚನೆಗಳು ಆಂಡ್ರಾಯ್ಡ್ ಮೊಬೈಲ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಮೋಸ ಮಾಡಲಾಗುತ್ತಿದೆ.

ಆದ್ದರಿಂದ ವಾಟ್ಸಪ್ ಫೇಸ್ ಬುಕ್ ಮೆಸೆಂಜರ್, ಟೆಲಿಗ್ರಾಂ ಸೇರಿ ಸಾಮಾಜಿಕ ಜಾಲತಾಣದಲ್ಲಿ ಬರುವ ಈ ರೀತಿಯ ಎಪಿಕೆ ಫೈಲ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳದಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ.

Previous articleಅಮಾನತು ಮಾಡಿರುವ ನಿರ್ಧಾರ ಸರಿಯಾಗಿದೆ
Next articleಶಾಸಕರ ಅಮಾನತು‌ ವಾಪಸ್ ಪಡೆಯಬೇಕು