ಶಾಲಾ ಬಸ್‌ ಪಲ್ಟಿ

0
81

ಗದಗ: ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಶಾಲಾ ಬಸ್​ ಪಲ್ಟಿ ಹೊಡೆದ ಘಟನೆ ನಡೆದಿದೆ.
ನಗರದ R.K.ನಗರ ಬಳಿಯ ಅಂಡರ್​ಪಾಸ್​ನಲ್ಲಿ ಈ ಘಟನೆ ನಡೆದಿದ್ದು. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಈ ಘಟನೆ ಸಂಭವಿಸಿದ್ದರಿಂದ, ಬಸ್‌ನಲ್ಲಿ ಯಾವುದೇ ಮಕ್ಕಳು ಇಲ್ಲದ್ದರಿಂದ, ಭೀಕರ ಅನಾಹುತ ತಪ್ಪಿದೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ​ ಸ್ಕೂಲ್ ಬಸ್​ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ಪೀಡರ್ ಯೋಜನೆ ನಿಲ್ಲಿಸಿ
Next articleಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ