ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್(ವಾಸು) ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬೆಂಬಲಿಗರು, ಮುಖಂಡರ ಜತೆ ಮಾತನಾಡಿ ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾ.31ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದರು ತಿಳಿಸಿದ್ದಾರೆ.