ಪಾಟ್ನಾ: ಬಿಹಾರ ರಾಜ್ಯದಲ್ಲಿ ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪಾಟ್ನಾ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ವೇಳೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರೊಬ್ಬರು ಮೃತಪಟ್ಟಿದ್ದಾರೆ. ವಿವರಗಳ ಪ್ರಕಾರ, ಮೃತರನ್ನು ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರತಿಕ್ರಿಯಿಸಿ, ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ರಾಜ್ಯ ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ. ಮಹಾಘಟಬಂಧನ್ ಸರ್ಕಾರವು ಭ್ರಷ್ಟಾಚಾರದ ಕೋಟೆಯನ್ನು ರಕ್ಷಿಸುವ ಸಲುವಾಗಿ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ. ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ರಕ್ಷಿಸಲು ಬಿಹಾರದ ಮುಖ್ಯಮಂತ್ರಿಗಳು ತಮ್ಮ ನೈತಿಕತೆಯನ್ನು ಮರೆತಿದ್ದಾರೆ ಎಂದಿದ್ದಾರೆ.