ಶಿಕ್ಷಣದಲ್ಲಿ ‘ದ್ವಿಭಾಷಾ ನೀತಿ’ಗೆ ಒತ್ತಾಯಿಸಿ ಬೃಹತ್ ಆನ್‌ಲೈನ್ ಅಭಿಯಾನ

0
32

ಬೆಂಗಳೂರು: ಕನ್ನಡ ಮಕ್ಕಳಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ ಜಾರಿಗೊಳಿಸುವಂತೆ ಒತ್ತಾಯಿಸಿ ಅಭಿಯಾನ ಆರಂಭಗೊಂಡಿದೆ.
ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆಯ ರಾಜ್ಯ ಪಠ್ಯಕ್ರಮದಲ್ಲಿ ‘ದ್ವಿಭಾಷಾ ನೀತಿ’ ಜಾರಿಗೊಳಿಸುವಂತೆ ಒತ್ತಾಯಿಸಿ ‘ನಮ್ಮ ನಾಡು ನಮ್ಮ ಆಳ್ವಿಕೆ’ ಸಂಘಟನೆಯು ಬೃಹತ್ ಆನ್‌ಲೈನ್ ಅಭಿಯಾನಕ್ಕೆ ಚಾಲನೆ ನೀಡಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಬೇಕು, ಪ್ರಸ್ತುತ ಇರುವ ತ್ರಿಭಾಷಾ ನೀತಿಯನ್ನು ನಿಲ್ಲಿಸಬೇಕು ಎಂಬುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದ್ದು, ಈ ಅಭಿಯಾನದ ಭಾಗವಾಗಿ, ಸಾಮಾಜಿಕ ಜಾಲತಾಣದ ಮೂಲಕ ಆನ್‌ಲೈನ್ ಪಿಟಿಷನ್‌ಗೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ಅವರು ಆನ್‌ಲೈನ್ ಪಿಟಿಷನ್‌ಗೆ ಮೊದಲ ಸಹಿ ಹಾಕಿ ಈ ಮಹತ್ವದ ಅಭಿಯಾನಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

https://chng.it/tHZmC9qhsF


Previous articleಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ
Next articleಮನೆ ಗೋಡೆ ಕುಸಿದು ಮಹಿಳೆ ಸಾವು