ಸಂಬಳ ಇಲ್ಲದೆ ದುಡಿಯುವಂತ ದಿನಗಳು ದೂರವಿಲ್ಲ

0
31

ಬೆಂಗಳೂರು: ಸಾರಿಗೆ ನೌಕರರಿಗೆ ಅರ್ಧ ಸಂಬಳ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ, ಈ ಬಗ್ಗೆ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, “ಶಕ್ತಿ ಯೋಜನೆ ಫಲ ಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ.
ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ.
ಬರುವಂತ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್‌ಗಳನ್ನು ಡಿಸೆಲ್ ಇಲ್ಲದೆ ನಿಲ್ಲಿಸುವಂತದ್ದು ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್‌ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ” ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರದ ಆರ್ಥಿಕತೆಯ ಕುರಿತು ಕುಟುಕಿದ್ದಾರೆ.

Previous articleಅರಗ ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಆಗ್ರಹ
Next articleಕರ್ನಾಟಕ ಮಾದರಿ ಆಡಳಿತ ಇಡೀ ದೇಶಕ್ಕೆ ಅವಶ್ಯ