ಸಂಸದ ಬಿ.ಎನ್‌. ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

0
11

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಸದರಿ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಈ ಮೂಲಕ ತಮ್ಮನ್ನು ಕೋರುತ್ತೇನೆ. 2008ರಲ್ಲಿ ಬಿಜೆಪಿ ಪಾರ್ಟಿಯಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ ಸಚಿವನಾಗಿ ಮತ್ತು 2019ರಲ್ಲಿ ಸಂಸದನಾಗಿ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

Previous articleಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿರುವ ಮರಿತಿಬ್ಬೇಗೌಡ
Next article6 ವಿಭಿನ್ನ ಸೇವೆ, ನೂರಾರು ನಗು: ನಂದಗಡದ ವಿಶೇಷ