ಸಮಾಜಘಾತುಕ ಶಕ್ತಿಗಳಿಗೆ ಸರ್ಕಾರದ ಬೆಂಬಲ: ಬೊಮ್ಮಾಯಿ

0
11

ಸಮಾಜಘಾತುಕ ಶಕ್ತಿಗಳು ಈಗ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಸಮಾಜ ಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ವಿಕಲಾಂಗನ ಮೇಲೆ ಖಾಕಿ ದರ್ಪ ವಿಚಾರವಾಗಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಭಯ ಹೋಗಿದೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ.
ಸಾಮಾನ್ಯ ಜನರ ಮೇಲೆ ಹಲ್ಲೆ, ಹೆಣ್ಣುಮಕ್ಕಳ ಮೇಲೆ ಹಲ್ಲೆ ಆಗುತ್ತದೆ.
ಪೊಲೀಸ ಅಧಿಕಾರಿಗಳ ಕೊಲೆ ಆಗುತ್ತದೆ, ಮತ್ತೊಂದೆಡೆ ಪೊಲೀಸರಿಂದ ಅಮಾಯಕರ ಮೇಲೆ ಹಲ್ಲೆ ಆಗುತ್ತದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ಕೂಡಲೇ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ ಎಂದರು.

Previous articleತೋಟಗಾರಿಕೆ ಬೆಳೆಗಳಿಗೆ ವಿಮೆ ಪಾವತಿ: ಜು. 31ರಂದು ಕೊನೆ ದಿನ
Next articleನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ