ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ

0
13

ಬೆಂಗಳೂರು: ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮಿಳನಾಡಿಗೆ ನೀರು ಬಿಡುವ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ ಆದರೂ ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ. ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು, ಅದು ಕೂಡ ಮಾಡಿಲ್ಲ. ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದಿದ್ದಾರೆ.

Previous articleಅನಧಿಕೃತ ಬ್ಯಾನರ್‌: ಸಚಿವ ಪ್ರಿಯಾಂಕ್‌ ಖರ್ಗೆಗೆ 5000 ದಂಡ
Next articleತಮಿಳುನಾಡಿಗೆ ನೀರು: ಶ್ರೀರಂಗಪಟ್ಟಣದಲ್ಲಿ ಕಾವೇರಿ ನೀರಿನ ಮೇಲೆ ಆಣೆ ಮಾಡಿ ಅರೆಬೆತ್ತಲೆ ಪ್ರತಿಭಟನೆ