ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

0
11
ಯತ್ನಾಳ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆಯಲು ನಿರ್ಧರಿಸಿರುವ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.

Previous articleತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನ ಬರ್ಬರ ಕೊಲೆ
Next articleನಾಟಕೀಯ ಬೆಳವಣಿಗೆ: ಬಳ್ಳಾರಿ ಮೇಯರ್ ಚುನಾವಣೆ ಮುಂದಕ್ಕೆ!