ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ದೊಂಬರಾಟ

0
27

ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ, ಜಾತಿ ಗಣತಿ ಹಾಗೂ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ‘ಕೋಮು ಸಂಘರ್ಷ ನಿಗ್ರಹ ಪಡೆ’ ಎಂದು ಹೇಳಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ವಿಷಯಾಂತರ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ದೂರಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಶೂನ್ಯ ಮಾರ್ಕ್ಸ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರು? ದೇಶದ ಜನತೆ ಮೋದಿ ಸರ್ಕಾರಕ್ಕೆ ೧೦೦ಕ್ಕೆ ೧೦೦ ಅಂಕಗಳನ್ನು ಕೊಟ್ಟಿದ್ದಾರೆ. ಕಾಂಗ್ರೆಸ್ ನಾಯಕರುತಾನು ಕಳ್ಳ ಪರರ ನಂಬ’ ಎಂಬ ಗಾದೆಯಂತೆ ವರ್ತಿಸುತ್ತಿದ್ದಾರೆ. ಸ್ವಜನಪಕ್ಷಪಾತ, ಭ್ರಷ್ಟಾಚಾರ ಮತ್ತು ಸ್ವಾರ್ಥ ರಾಜಕಾರಣದಲ್ಲಿ ಮೋದಿಗೆ ಜನತೆ ಶೂನ್ಯ ಅಂಕ ಕೊಡುತ್ತಾರೆ. ಆದರೆ, ಜಾಗತಿಕ ಸಾಧನೆಯಲ್ಲಿ ನಿಜಕ್ಕೂ ಅವರು ತ್ರಿವಿಕ್ರಮ ಆಗಿದ್ದಾರೆ ಎಂದು ಬಣ್ಣಿಸಿದರು. ಹಿಂದಿನ ಸರ್ಕಾರಗಳು ಜಾತಿ ಆಧಾರದ ಮೇಲೆ ಯೋಜನೆಗಳನ್ನು ರೂಪಿಸುತ್ತಿದ್ದವು. ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ೧೧ ವರ್ಷಗಳಲ್ಲಿ ಬಡತನದ ಆಧಾರದ ಮೇಲೆ ಯೋಜನೆಗಳನ್ನು ರೂಪಿಸಿದ್ದಾರೆ. ಜಿ-೨೦ ಶೃಂಗಸಭೆಯ ಅಧ್ಯಕ್ಷತೆ ವಹಿಸುವ ಮೂಲಕ ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ. ರಾಜತಾಂತ್ರಿಕತೆಗೆ ಆದ್ಯತೆ ನೀಡುವ ಮೂಲಕವೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಎಂದರು. ಪಾಕಿಸ್ತಾನದ ಭಯೋತ್ಪಾದಕ ನೆಲೆಗಳಿಗೆ ನುಗ್ಗಿ ಶಿಕ್ಷೆ ನೀಡುವ ಮೂಲಕ ಭಾರತ ತನ್ನ ಸಾಮರ್ಥ್ಯ ಪ್ರದರ್ಶಿಸಿ, ಶೇ.೯೦ರಷ್ಟು ಭಯೋತ್ಪಾದಕ ಚಟುವಟಿಕೆಗೆ ನರೇಂದ್ರ ಮೋದಿ ಸರ್ಕಾರ ಕಡಿವಾಣ ಹಾಕಿದೆ. ೨೧ನೇ ಶತಮಾನದಲ್ಲಿ ಭಾರತ ವಿಶ್ವದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ನಾಯಕನಾಗಿ ರೂಪುಗೊಂಡು ವಿಶ್ವಮಿತ್ರನಾಗಬೇಕು ಎನ್ನುವುದು ಮೋದಿಯವರ ಸಂಕಲ್ಪವಾಗಿದೆ ಎಂದು ತಿಳಿಸಿದರು.

Previous articleಹಳಿ ತಪ್ಪಿದ ರೈಲು ಬೋಗಿ : ತಪ್ಪಿದ ಭಾರಿ ಅನಾಹುತ
Next articleಹಿಂದೂಗಳ ಪಾಲಿಗೆ ತುರ್ತು ಪರಿಸ್ಥಿತಿಯ ವಾತಾವರಣ