ಹಾವೇರಿ: ಸಾರಿಗೆ ಬಸ್‍ನಿಂದ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ 14 ವರ್ಷದ ಬಾಲಕಿ ಮಧು ಕುಂಬಾರ ಸಾವನ್ನಪ್ಪಿದ್ದಾಳೆ.
ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಪ್ರೌಢಶಾಲೆಗೆ ಆಗಮಿಸುತ್ತಿದ್ದ ವಿದ್ಯಾರ್ಥಿನಿ. ಬಸ್ ತುಂಬಾ ರಶ್ ಇರುವ ಕಾರಣಕ್ಕಾಗಿ ಬಾಗಿಲ ಬಳಿಯೇ ನಿಂತಿದ್ದಳು. ಶಾಲಾ ಬಾಲಕಿ ಆಯ ತಪ್ಪಿ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.